ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಪೇಟೆಯಲ್ಲಿ ಜನ ಜೀವನ ಅಸ್ತವ್ಯಸ್ತ ಆಗಿದೆ.
ಮಳೆಯ ನೀರು ಮನೆಗೆ ನುಗ್ಗಿ ಅವಾಂತರ ಮಾಡಿದೆ. ಅಲ್ಲದೇ, ಆನಂದ್ ಸದಯ್ಯನಮಠ ಮನೆ ಸಂಪೂರ್ಣ ಜಲಾವೃತಗೊಂಡಿದೆ.
ಮನೆಯಲ್ಲಿ ಕುಳಿತುಕೊಳ್ಳಲು ಹಾಗೂ ಇರಲು ಸ್ಥಳವಿಲ್ಲದೇ ಮಕ್ಕಳು ಹಾಗೂ ಮನೆಯವರು ಪರದಾಟ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande