ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಎರಡು ದಿನಗಳ 'ರಾಷ್ಟ್ರೀಯ ಕೃಷಿ ಸಮ್ಮೇಳನ-ರಬಿ ಅಭಿಯಾನ್ 2025' ಇಂದು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಪುಸಾ)ಯಲ್ಲಿ ಪ್ರಾರಂಭವಾಗಲಿದೆ.
ಈ ಸಮ್ಮೇಳನದ ಅಧ್ಯಕ್ಷತೆಯನ್ನು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ವಹಿಸಲಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ದೇಶಾದ್ಯಂತದ ಕೃಷಿ ತಜ್ಞರು, ವಿಜ್ಞಾನಿಗಳು, ನೀತಿ ನಿರೂಪಕರು ಮತ್ತು ರಾಜ್ಯ ಸರ್ಕಾರಗಳ ಹಿರಿಯ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಹಲವು ರಾಜ್ಯಗಳ ಕೃಷಿ ಸಚಿವರು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಕಾರ್ಯದರ್ಶಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕರು ಮತ್ತು ಇತರ ಸಂಬಂಧಿತ ಕೇಂದ್ರ ಸಚಿವಾಲಯಗಳು ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa