ಸೆಪ್ಟೆಂಬರ್ 19ರಂದು ಮಹಿಳಾ ಸ್ಪಂದನಾ
ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ರಾಯಚೂರ ಜಿಲ್ಲೆಯಲ್ಲಿ ಸೆಪ್ಟೆಂಬರ್ 17ರಿಂದ 19ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನಲೆಯಲ್ಲಿ ಸೆ.19ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ
ಸೆಪ್ಟೆಂಬರ್ 19ರಂದು ಮಹಿಳಾ ಸ್ಪಂದನಾ


ರಾಯಚೂರು, 15 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ರಾಯಚೂರ ಜಿಲ್ಲೆಯಲ್ಲಿ ಸೆಪ್ಟೆಂಬರ್ 17ರಿಂದ 19ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನಲೆಯಲ್ಲಿ ಸೆ.19ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಮಹಿಳೆಯರೊಂದಿಗೆ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಆಧಾರ ಕಾರ್ಡ್, ಆರೋಗ್ಯ ಕಾರ್ಡ್, ವಿಧವಾ ವೇತನ, ಪ್ರಾಯೋಜಕತ್ವ ಯೋಜನೆ, ವಿಕಲಚೇತನರ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಅವಶ್ಯಕತೆ ಇರುವ ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಲು ಅಗತ್ಯ ದಾಖಲೆಗಳೊಂದಿಗೆ ಆಗಮಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande