ಕೊಪ್ಪಳ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಸೆ. 16ರಂದು ಬೆಂಗಳೂರಿನಿಂದ ರಸ್ತೆಯ ಮೂಲಕ ನಿರ್ಗಮಿಸಿ, ಅಂದು ರಾತ್ರಿ 9.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ನಾಳೆ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚಾರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಏರ್ಪಡಿಸಿರುವ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 11.15ಕ್ಕೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯ ಹೊಸ ನಿವೇಶನದ ಸ್ಥಳ ವೀಕ್ಷಣೆ ಮಾಡುವರು.
11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕರೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 12 ಗಂಟೆಗೆ ಆಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಶ್ರೀ ಹುಲಿಗೆಮ್ಮ ದೇವ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಕೊಪ್ಪಳ ಜಿಲ್ಲೆಯ ಇತರೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 1 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, ಕನಕಗಿರಿಗೆ ಆಗಮಿಸುವರು. ಅಂದು ಮಧ್ಯಾಹ್ನ 2 ಗಂಟೆಗೆ ಕನಕಗಿರಿಯ ಶ್ರೀ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ನಡೆಯುವ ಅಖಂಡ ಗಂಗಾವತಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ, ಸಂಜೆ 4 ಗಂಟೆಗೆ ಕನಕಗಿರಿಯಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್