ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ : ಜಿಪಂ ಸಿಇಓ ರಿಷಿ ಆನಂದ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿ
ರಿಷಿ


ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ.

ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು 17ನೇ ಸೆಪ್ಟೆಂಬರ್ 2025 ರಿಂದ 2ನೇ ಅಕ್ಟೋಬರ್ 2025ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಣಾಧಿಕಾರಿಯಾದ ರಿಷಿ ಆನಂದ ಅವರು ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಸ್ವಚ್ಛ ಭಾರತ ಅಭಿಯಾನವು 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆ ಗೌರವಿಸಲು ಈ ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಯ ಮೂಲಕ ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸುವುದು ಹಾಗೂ ಕಳೆದ ದಶಕದ ಸಾಧನೆಗಳ ಆಚರಣೆ ಮತ್ತು ಸಂಪೂರ್ಣ ಸ್ವಚ್ಛತೆಗೆ ನಮ್ಮ ಬದ್ಧತೆಯನ್ನು ತೊರಿಸುವ ಕಾರ್ಯವನ್ನು ಈ ಅಭಿಯಾನದಲ್ಲಿ ಮಾಡಲಾಗುತ್ತಿದೆ.

ಜೊತೆಗೆ ಈ ಅಭಿಯಾನದ ಭಾಗವಾಗಿ ಜನರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಕ್ಕೆ ಪ್ರಾಶಸ್ತö್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ನೈರ್ಮಲ್ಯ ಸಾಧಿಸಲು ಕೆಲ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಸ್ವಚ್ಛತಾ ಗುರಿ ಘಟಕಗಳ (ಅಖಿU) ಪರಿವರ್ತನೆ: ಬೃಹತ್ ಕಸ ರಾಶಿ ಹೊಂದಿರುವ ಸ್ಥಳಗಳು ಮತ್ತು ಅನೈರ್ಮಲ್ಯ ಹೊಂದಿರುವ ಸ್ಥಳಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸುವುದು.

ಸಾರ್ವಜನಿಕ ಸ್ಥಳಗಳ ಸ್ವಚ್ಛತೆ: ಜನಸಂದಣಿ ಹೆಚ್ಚಿರುವ ಸ್ಥಳಗಳು ಮತ್ತು ಸಂಸ್ಥೆಗಳ ಆವರಣಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಲು ಸ್ವಚ್ಛತಾ ಶ್ರಮದಾನಗಳನ್ನು ಹಮ್ಮಿಕೊಳ್ಳುವುದು.ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ನೈರ್ಮಲ್ಯ ಕಾರ್ಯಕರ್ತರಿಗೆ ಆರೋಗ್ಯ ತಪಾಸಣೆ ಮತ್ತು ಸರ್ಕಾರದ ವತಿಯಿಂದ ಜಾರಿ ಮಾಡಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಏಕ ಗವಾಕ್ಷಿ ಶಿಬಿರಗಳನ್ನು ಆಯೋಜಿಸುವುದು.

ಸ್ವಚ್ಛ ಹಸಿರು ಉತ್ಸವ: ಪರಿಸರ ಸ್ನೇಹಿ ಮತ್ತು ತ್ಯಾಜ್ಯ ರಹಿತ ಹಬ್ಬಗಳ ಆಚರಣೆಯನ್ನು ಪ್ರೋತ್ಸಾಹಿಸುವುದು ಮತ್ತು ಪರಿಸರ ಸ್ನೇಹಿ ಹಬ್ಬಗಳ ಆಚರಣೆಗಾಗಿ ಸ್ಥಳೀಯ ಸಂಘಟನೆಗಳೊ0ದಿಗೆ ಕೈಜೋಡಿಸುವುದು.

ಪ್ರಚಾರ ಚಟುವಟಿಕೆಗಳು : ಸ್ವಚ್ಛ ಸುಜಲ ಗ್ರಾಮ, ತ್ಯಾಜ್ಯದಿಂದ ಕಲಾಕೃತಿಗಳ ರಚನೆ, ಸ್ವಚ್ಛ ಬೀದಿ-ಸ್ವಚ್ಛ ಆಹಾರ ಮತ್ತು ಆರ್‌ಆರ್‌ಆರ್ ಕೇಂದ್ರಗಳು ಮುಂತಾದ ಉಪಕ್ರಮಗಳ ಕುರಿತಾಗಿ ಜಾಗೃತಿ ಮೂಡಿಸುವುದು.

25ನೇ ಸೆಪ್ಟೆಂಬರ್ 2025ರಂದು ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ: ಈ ಹಿಂದಿನ ವರ್ಷಗಳಂತೆ, ಕೋಟ್ಯಂತರ ಜನರು ಸ್ವಯಂಪ್ರೇರಿತರಾಗಿ ಲಕ್ಷಾಂತರ ಸ್ಥಳಗಳಲ್ಲಿ ಒಂದು ಗಂಟೆ ಸ್ವಚ್ಛತಾ ಸೇವೆಗೆ ಕೊಡುಗೆ ನೀಡಿದಂತೆ ಈ ವರ್ಷ ಕೂಡ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಎಂಬ ಘೋಷ ವಾಕ್ಯದಡಿ 25ನೇ ಸೆಪ್ಟೆಂಬರ್‌ರ0ದು ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳುವುದು. ಸ್ವಚ್ಛತೆಗಾಗಿ ನಾಗರಿಕರು ಕೈಜೋಡಿಸಲು ಇದು ಒಂದು ಸಹಕಾರಿಯಾಗಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ಜಪ್ರತಿನಿಧಿಗಳನ್ನು, ಸೆಲೆಬ್ರಿಟಿಗಳು ಮತ್ತು ಆಧ್ಯಾತ್ಮಿಕ ನಾಯಕರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಖಾಸಗಿ ವಲಯ, ಎನ್.ಜಿ.ಓಗಳು ಮತ್ತು ಇತರ ಪಾಲುದಾರರ ಸಹಭಾಗಿತ್ವವನ್ನು ಉತ್ತೇಜಿಸುವುದು.

ನೈಸರ್ಗಿಕ ವಿಕೋಪ ಪೀಡಿತ ಪ್ರದೇಶಗಳಲ್ಲಿ ಕ್ರಮಗಳು: ಪ್ರವಾಹ ಅಥವಾ ಇತರೆ ನೈಸರ್ಗಿಕ ವಿಕೋಪಗಳಿಂದ ಪೀಡಿತವಾಗಿರುವ ಪ್ರದೇಶಗಳಲ್ಲಿ ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ನೈರ್ಮಲ್ಯ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಪರಿಹಾರ ಕಾರ್ಯಗಳೊಂದಿಗೆ ಅವುಗಳನ್ನು ಸಂಯೋಜಿಸಲು ಕ್ರಮವಹಿಸಲಾಗುವುದು.

ಈ ಅಂಶಗಳ0ತೆ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸ್ವಚ್ಛತೆಯೇ ಸೇವೆ -2025ರ ಅಭಿಯಾನವನ್ನು ಯಶಸ್ವಿಗೊಳಿಸಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಪ್ರಯುಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande