ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರವರು ಸೆ.19 ಶುಕ್ರವಾರದಿಂದ ಸೆ.22 ಸೋಮವಾರದ ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ.19 ಶುಕ್ರವಾರ ಮ.3ಗಂ.
ಸಚಿವ


ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರವರು ಸೆ.19 ಶುಕ್ರವಾರದಿಂದ ಸೆ.22 ಸೋಮವಾರದ ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ದಿ.19 ಶುಕ್ರವಾರ ಮ.3ಗಂ. ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಕೆ.ಎಸ್.ಡಿ.ಎಲ್ ಸಿ.ಎಸ್.ಆರ್ ಅನುದಾನದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿಗೆ ಕಿಟ್ ವಿತರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ದಿ.20 ಶನಿವಾರ ಬೆ.11ಗಂ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗವಹಿಸುವರು. ಸಂ.4ಗಂ. ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್-2025 ರ ಸಿದ್ಧತೆಗಳ ಕುರಿತು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ದಿ.21 ರವಿವಾರ ಬೆ.10ಗಂ. ಅರಕೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಅಂದಾಜು 7ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ನಂತರ ಬೆ.11ಗಂ. ತಿಕೋಟಾ ಕನಕದಾಸ ಭವನದಲ್ಲಿ ನಡೆಯಲಿರುವ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದ್ರಾಕ್ಷಿ ಬೆಳೆಯ ವಿಚಾರ ಸಂಕಿರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ದಿ.22 ಸೋಮವಾರ ಬೆ.11.30ಗಂ. ತಿಕೋಟಾ ಪಟ್ಟಣದಲ್ಲಿ ಅಮ್ಮಾ ಫಂಕ್ಷನ್ ಹಾಲ್ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande