ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾಪಾಕ್ಷಿಕ ಅಭಿಯಾನದಡಿ ಬಿಜೆಪಿ ಬೆಂಗಳೂರು ದಕ್ಷಿಣ ವತಿಯಿಂದ ಜಯನಗರದ ಚಾಮುಂಡೇಶ್ವರಿ ಆಟದ ಮೈದಾನದಲ್ಲಿ ಏರ್ಪಡಿಸಲಾದ ನಾನಾ ಸೇವಾ ಚಟುವಟಿಕೆಗಳ ಕಾರ್ಯಕ್ರಮವನ್ನು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಸಿ. ಕೆ. ರಾಮಮೂರ್ತಿ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa