ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ ಮುಂದುವರಿಕೆ
ಶಿವಮೊಗ್ಗ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳ
ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ ಮುಂದುವರಿಕೆ


ಶಿವಮೊಗ್ಗ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande