ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನ
ಗದಗ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಚರ್ಮ ಕುಶಲ ಕರ್ಮಿಗಳಿಗಾಗಿ 2025-26 ನೇ ಸಾಲಿನ ಕ್ರಿಯಾ ಯೋಜನೆಯ ಪ್ರಕಾರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ
ಪೋಟೋ


ಗದಗ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಚರ್ಮ ಕುಶಲ ಕರ್ಮಿಗಳಿಗಾಗಿ 2025-26 ನೇ ಸಾಲಿನ ಕ್ರಿಯಾ ಯೋಜನೆಯ ಪ್ರಕಾರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು ಗದಗ ಜಿಲ್ಲೆಯ ಚರ್ಮ ಕುಶಲಕರ್ಮಿಗಳ ಸಮುದಾಯಗಳಾದ ಮಾದಿಗ, ಸಮಗಾರ, ಡೋರ, ಮಚಗಾರ, ಜನಾಂಗದವರಿಗೆ ಮಾತ್ರ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಕರ್ನಾಟಕ ಒನ್ ಮೂಲಕ ಅಥವಾ ಗ್ರಾಮ ಒನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಗಳ ವಿವರ : ನೇರ ಸಾಲ ಯೋಜನೆ ; ಚರ್ಮ ಕುಶಲ ಕರ್ಮಿಗಳಿಗೆ ಹೊಸ ತಂತ್ರಜ್ಞಾನ ವಿನ್ಯಾಸಗಳು ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳು ನಾಡು , ಮಹಾರಾಷ್ಟ್ರ , ಉತ್ತರ ಪ್ರದೇಶ, ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ; ವಸತಿ ಯೋಜನೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಸಂಯೋಜಕರ ಕಚೇರಿ, ( ಜಿಲ್ಲಾಡಳಿತ ಭವನ ಗದಗ ಜಿಲ್ಲೆ ರೂಂ 122/1 ಸಮಾಜ ಕಲ್ಯಾಣ ಇಲಾಖೆ ( ಅಲೆಮಾರಿ ಅಭಿವೃದ್ದಿ ಕೋಶ) ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 9900887904, 9620251984 ಸಂಪರ್ಕಿಸಬಹುದಾಗಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande