ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಇಂದು ಹರಿಯಾಣ ಮತ್ತು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಕೇಂದ್ರೀಕರಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಹರಿಯಾಣದ ರೋಹ್ಟಕ್ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದ ಟ್ಯಾಗೋರ್ ಆಡಿಟೋರಿಯಂನಲ್ಲಿ ನಡೆಯುವ ‘ಸ್ವಸ್ಥ ನಾರಿ ಸಶಕ್ತ ಪರಿವಾರ್ ಅಭಿಯಾನ’ ಉದ್ಘಾಟನಾ ಕಾರ್ಯಕ್ರಮದಲ್ಲಿ ನಡ್ಡಾ ಹಾಜರಾಗುವರು.
ಅದೇ ರೀತಿ ಸಂಜೆ 5 ಗಂಟೆಗೆ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ನಲ್ಲಿ ಆಯೋಜಿಸಿರುವ ಪ್ರಧಾನಿಯವರ 75ನೇ ಜನ್ಮದಿನ ಅಂಗವಾಗಿ ‘ಸೇವಾ ಹಿ ಸಂಕಲ್ಪ, ರಾಷ್ಟ್ರ ಪ್ರಥಮ ಹಿ ಪ್ರೇರಣಾ... 75 ವರ್ಷ’ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa