ಮಹಿಳಾ ಕೇಂದ್ರಿತ ಆರೋಗ್ಯ ಅಭಿಯಾನಕ್ಕೆ ಪ್ರಧಾನಿ ಚಾಲನೆ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದೇ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ''ಆರೋಗ್ಯಕರ ಮಹಿಳಾ ಸಬಲೀಕರಣ ಕುಟುಂಬ'' ಹಾಗೂ
Pm


ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದೇ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಮಹಿಳಾ ಆರೋಗ್ಯ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

'ಆರೋಗ್ಯಕರ ಮಹಿಳಾ ಸಬಲೀಕರಣ ಕುಟುಂಬ' ಹಾಗೂ 'ಎಂಟನೇ ರಾಷ್ಟ್ರೀಯ ಪೌಷ್ಟಿಕಾಂಶ ಮಾಸ' ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ದೇಶಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು. ಆಯುಷ್ಮಾನ್ ಆರೋಗ್ಯ ಮಂದಿರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿದಿನ ಆರೋಗ್ಯ ಶಿಬಿರ ನಡೆಯಲಿದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ದೇಶದ ಸುಮಾರು 10 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡುವರು.

ತಾಯಿ-ಮಗುವಿನ ಆರೋಗ್ಯ ಜಾಗೃತಿಗಾಗಿ ' ಸಖಿ ಚಾಟ್‌ಬಾಟ್' ಅನ್ನು ಆರಂಭಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶಗಳ ಗರ್ಭಿಣಿಯರಿಗೆ ಸಮಯೋಚಿತ ಮಾಹಿತಿ ಹಾಗೂ ಅಗತ್ಯ ಆರೋಗ್ಯ ಸೇವೆ ಲಭ್ಯವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande