ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ಮೋದಿ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆ ನೀಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ 75 ಪೌರ ಕಾರ್ಮಿಕರನ್ನು ಸನ್ಮಾನಿಸಿ, ನಾನಾ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಮಾತನಾಡಿ ದೇಶದ ಪ್ರಧಾನಿಯೋರ್ವರ ಜನ್ಮದಿನವನ್ನು ಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿರುವುದು ಮೋದಿಯವರ ವ್ಯಕ್ತಿತ್ವದ ಪ್ರತಿಬಿಂಬ ಎಂದರೆ ತಪ್ಪಾಗಲಾರದು ಎಂದು ಯಡಿಯೂರಪ್ಪ, ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa