ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಟ್ರಂಪ್
ವಾಷಿಂಗ್ಟನ್, 17 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ 75ನೇ ಹುಟ್ಟುಹಬ್ಬದ ಶುಭಾಶಯ ಕೋರಿದರು. ರಷ್ಯಾ–ಉಕ್ರೇನ್ ಸಂಘರ್ಷ ಅಂತ್ಯಗೊಳಿಸಲು ಮೋದಿ ನೀಡಿದ ಸಹಕಾರಕ್ಕಾಗಿ ಧನ್ಯವಾದ ಅರ್ಪಿಸಿದ ಅ
ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಟ್ರಂಪ್


ವಾಷಿಂಗ್ಟನ್, 17 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ 75ನೇ ಹುಟ್ಟುಹಬ್ಬದ ಶುಭಾಶಯ ಕೋರಿದರು.

ರಷ್ಯಾ–ಉಕ್ರೇನ್ ಸಂಘರ್ಷ ಅಂತ್ಯಗೊಳಿಸಲು ಮೋದಿ ನೀಡಿದ ಸಹಕಾರಕ್ಕಾಗಿ ಧನ್ಯವಾದ ಅರ್ಪಿಸಿದ ಅವರು, ಟ್ರೂತ್ ಸೋಷಿಯಲ್‌ನಲ್ಲಿ “ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಮೋದಿಯವರೂ ಪ್ರತಿಕ್ರಿಯೆ ನೀಡುತ್ತಾ, “ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್, ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ಭಾರತ–ಅಮೆರಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮವನ್ನು ಭಾರತ ಬೆಂಬಲಿಸುತ್ತದೆ” ಎಂದು ಎಕ್ಸನಲ್ಲಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande