ಶಿವಮೊಗ್ಗ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಜೀಂ ಪ್ರೇಮ್ಜಿ ಫೌಂಡೇಶನ್ವತಿಯಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಒದಗಿಸಲಾಗಿರುವ 1500ಕೋ. ಮೊತ್ತವನ್ನು ನಿಗಧಿಪಡಿಸಿದ ಉದ್ದೇಶಕ್ಕಾಗಿಯೇ ಬಳಸಿಕೊಳ್ಳುವಂತೆ ಮುಖ್ಯಮಂತ್ರಿಯವರ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಶ್ರೀಮತಿ ಬಿ.ವಿ.ಕಾವೇರಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ನಜೀರ್ಸಾಭ್ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 30 ಕೊಠಡಿಗಳ ನಿರ್ಮಾಣಕ್ಕೆ 408ಕೋಟಿ., ವಿವೇಕ ಶಾಲಾ ಬಾಕಿ ಅನುದಾನದಲ್ಲಿ 30ಕೊಠಡಿಗಳ ನಿರ್ಮಾಣಕ್ಕೆ 440ಕೋ. 347ಕೊಠಡಿಗಳ ದುರಸ್ತಿಗೆ 474ಕೋ. ಹಾಗೂ ಪರಿಶಿಷ್ಟ ಜಾತಿ/ವರ್ಗಗಳ ಯೋಜನೆಯಡಿಯಲ್ಲಿ ಕೊಠಡಿಗಳ ದುರಸ್ತಿಗೆ 10ಕೋ. ರೂ.ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಈವರೆಗೆ ಆಗಿರುವ ಮಳೆ ಅಗತ್ಯಕ್ಕಿಂತ ಹೆಚ್ಚಾಗಿದೆ. ಆದರೆ, ಆಗಸ್ಟ್ಮಾಹೆಯಲ್ಲಿ -20 ರಷ್ಟು ಮತ್ತು ಸೆಪ್ಟಂಬರ್ಮಾಹೆಯಲ್ಲಿ -32ರಷ್ಟು ಮಳೆಯ ಕೊರತೆ ಇದ್ದಾಗಿಯೂ ಬಿತ್ತನೆ ಪ್ರಮಾಣ, ಬೀಜ-ರಸಗೊಬ್ಬರದ ದಾಸ್ತಾನುಗಳ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಹಾಗೂ ಕೊಳೆರೋಗಕ್ಕೆ ತುತ್ತಾಗಿರುವ ಅಡಿಕೆ ಬೆಳೆಯ ಮಾಹಿತಿ ಪಡೆದು, ಬೆಳೆ ನಷ್ಟದ ಪ್ರಮಾಣವನ್ನು ತ್ವರಿತವಾಗಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯ ಸೊರಬ, ಸಾಗರ, ಶಿಕಾರಿಪುರ ತಾಲೂಕಿನಲ್ಲಿ ಜೇನುಕೃಷಿಗೆ ವಿಫುಲ ಅವಕಾಶಗಳಿದ್ದು, ಜೇನುಕೃಷಿಯ ಉತ್ತೇಜನಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾತನಾಡಿ, ಜೇನುಪೆಟ್ಟಿಗೆಗೆ ಭಾರೀ ಪ್ರಮಾಣದ ಬೇಡಿಕೆ ಇದ್ದು, ಅಧ್ಯತೆಯ ಮೇಲೆ ಒಂದೊಂದು ಜೇನುಪೆಟ್ಟಿಗೆಯನ್ನು ವಿತರಿಸಲಾಗುತ್ತಿದೆ. ಹೆಚ್ಚುವರಿ ಜೇನುಪೆಟ್ಟಿಗೆಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕ್ರಿಯಾಯೋಜನೆ ಅನುಮೋದನೆಯ ನಂತರ ಅವುಗಳನ್ನು ಪೂರೈಸಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಪ್ರತ್ಯೇಕ ಆಸ್ಪತ್ರೆ ಇರುವುದಿಲ್ಲ. ಇರುವ ಮೆಗ್ಗಾನ್ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಿ, ಮೇಲ್ದರ್ಜೆಗೇರಿಸಿ, ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸುವ ಸಂಬಂಧ ಬೆಂಗಳೂರಿನಲ್ಲಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಇಲಾಖಾ ಸಚಿವರ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಿ, ಚರ್ಚಿಸಲಾಗಿದೆ ಎಂದವರು ನುಡಿದರು.
ಇತರೆ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ನಿರ್ವಹಿಸಲಾಗುತ್ತಿರುವ ವಸತಿ ನಿಲಯಗಳಲ್ಲಿ ದಾಖಲಾತಿ ಬಯಸಿ ಭಾರೀ ಪ್ರಮಾಣದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ದಾಖಲಾತಿಗೆ ಒತ್ತಾಯಿಸುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಬಿ.ಸಿ.ಎಂ. ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಮತಿ ಶೋಭಾ ಅವರು ಉಸ್ತುವಾರಿ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಪ್ರೊಬೇಷನರ್ಜಿಲ್ಲಾಧಿಕಾರಿ ರಾಜೇಂದ್ರಬಾಬು ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa