ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಇಂದು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕಲಬುರಗಿ ನಗರ ಜಿಲ್ಲಾಧ್ಯಕ್ಷರಾದ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ಮೋದಿ@75 ಉದ್ಯೋಗ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾ. ರಾಜಶೇಖರ ಶಿವಾಚಾರ್ಯ ಶ್ರೀಗಳು, ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಬಿ. ಜಿ. ಪಾಟೀಲ್, ಶಶಿಲ್ ನಮೋಶಿ, ಶಾಸಕರಾದ ಡಾ. ಅವಿನಾಶ್ ಜಾದವ್, ಮಾಜಿ ಸಚಿವರಾದ ಬಾಬುರಾವ್ ಚೌಹಾಣ್, ಕಲ್ಬುರ್ಗಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ, ಮಾಜಿ ಶಾಸಕರಾದ ಅಮರನಾಥ್ ಪಾಟೀಲ್, ಸುಭಾಷ್ ಗುತ್ತೇದಾರ್, ದತ್ತಾತ್ರೇಯ ಪಾಟೀಲ್ ರೇವೂರ್, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಿ, ಕೈಲಾಸ್ ಬಿ. ಪಾಟೀಲ್, ನಿತಿನ್ ಗುತ್ತೇದಾರ್, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa