ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಲಬುರಗಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2025 ರ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ್, ಶಶಿಲ್ ನಮೋಶಿ, ಶಾಸಕರಾದ ಡಾ. ಅವಿನಾಶ್ ಜಾದವ್, ಮಾಜಿ ಸಚಿವರಾದ ಬಾಬುರಾವ್ ಚೌಹಾಣ್, ಕಲಬುರಗಿ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa