ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಆಳಂದ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಚಿವ ಈಶ್ವರ ಖಂಡ್ರೆ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಖಚಿತ ಮಾಹಿತಿ ಪಡೆದು ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ. ನಮ್ಮ ಮತ ನಮ್ಮ ಹಕ್ಕು, ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಹಿಂಬಾಗಿಲಿನಿಂದ ಬಂದಿರುವ ಈ ಸರ್ಕಾರವನ್ನು ಕಿತ್ತುಹಾಕುವವರೆಗೂ ಹೋರಾಟ ಮುಂದುವರಿಯುತ್ತದೆ” ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa