ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಬಿ.ಆರ್. ಪಾಟೀಲ್ ದೂರು ನೀಡಿದ್ದರೆ, ನಾನು ಹಾಗೂ ಪ್ರಿಯಾಂಕ್ ಖರ್ಗೆ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆವು. ಆದರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, 2023ರ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ 6018 ಮತದಾರರನ್ನು ಅಳಿಸಲು ಯತ್ನಿಸಲಾಗಿದೆ, ಕಾಂಗ್ರೆಸ್ ಬಲವಾದ ಬೂತ್‌ಗಳನ್ನೇ ಗುರಿಯಾಗಿಸಿ ಮತದಾರರನ್ನು ತೆಗೆದು ಹಾಕಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa