ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 23 ರಂದು ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಯುರ್ವೇದ ಜಾಗೃತಿ ಜಾಥಾವು ಅಂದು ಬೆಳಿಗ್ಗೆ 8.30 ಗಂಟೆಗೆ ನಗರದ ಶ್ರೀ ಗವಿಮಠದ ಆವರಣದಿಂದ ಪ್ರಾರಂಭವಾಗಿ ಗಡಿಯಾರ ಕಂಬ, ಅಶೋಕ ವೃತ್ತ ಮೂಲಕ ತಾಲ್ಲೂಕು ಕ್ರೀಡಾಂಗಣದವರೆಗೆ ನಡೆಯಲಿದೆ. ನಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸರ್ವ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಬ.ಹಿರೇಗೌಡರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್