ತಾತ್ಕಾಲಿಕ ಗುಮಾಸ್ತ ವ ಬೆರಳಚ್ಚುಗಾರ ಹುದ್ದೆಗೆ ಅರ್ಜಿ
ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಬೀಳಗಿ ತಾಲೂಕಾ ಕಾನೂನು ಸೇವಾ ಸಮಿತಿಯಲ್ಲಿ ಗುಮಾಸ್ತ ವ ಬೆರಳಚ್ಚುಗಾರ ತಲಾ ಒಂದು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಹಾಗೂ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ
ತಾತ್ಕಾಲಿಕ ಗುಮಾಸ್ತ ವ ಬೆರಳಚ್ಚುಗಾರ ಹುದ್ದೆಗೆ ಅರ್ಜಿ


ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಬೀಳಗಿ ತಾಲೂಕಾ ಕಾನೂನು ಸೇವಾ ಸಮಿತಿಯಲ್ಲಿ ಗುಮಾಸ್ತ ವ ಬೆರಳಚ್ಚುಗಾರ ತಲಾ ಒಂದು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಹಾಗೂ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಕಂಪ್ಯೂಟರ ಜ್ಞಾನ ಮತ್ತು ಪದವಿ ಹೊಂದಿರಬೇಕು. ಆಸಕ್ತರು ಸೆಪ್ಟೆಂಬರ ೨೨ ರೊಳಗಾಗಿ ಕಚೇರಿ ಅವಧಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್. ಕಟ್ಟಡ ಜಿಲ್ಲಾ ನ್ಯಾಯಾಲಯಗಳ ಆವರಣ, ಬಾಗಲಕೋಟೆ ಇಲ್ಲಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande