ದೆಹಲಿ ವಿವಿ ವಿದ್ಯಾರ್ಥಿ ಸಂಘ ಚುನಾವಣೆ ಮತ ಎಣಿಕೆ ಆರಂಭ
ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಡಿಯುಎಸ್‌ಯು) ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಗುರುವಾರ ಬೆಳಿಗ್ಗೆಯಿಂದ ಸಂಜೆ 7:30ರವರೆಗೆ ನಡೆದ ಮತದಾನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ವಿದ್ಯಾರ್
ದೆಹಲಿ ವಿವಿ ವಿದ್ಯಾರ್ಥಿ ಸಂಘ ಚುನಾವಣೆ ಮತ ಎಣಿಕೆ ಆರಂಭ


ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಡಿಯುಎಸ್‌ಯು) ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಗುರುವಾರ ಬೆಳಿಗ್ಗೆಯಿಂದ ಸಂಜೆ 7:30ರವರೆಗೆ ನಡೆದ ಮತದಾನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಎಬಿವಿಪಿಯಿಂದ ಆರ್ಯನ್ ಮಾನ್, ಎನ್ಎಸ್‌ಯುಐಯಿಂದ ಜೋಸೆಲಿನ್ ನಂದಿತಾ ಚೌಧರಿ, ಎಸ್‌ಎಫ್‌ಐ–ಎಐಎಸ್‌ಎ ಮೈತ್ರಿಕೂಟದಿಂದ ಅಂಜಲಿ ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಿದ್ದಾರೆ.

ವಿಶ್ವವಿದ್ಯಾಲಯದ 52 ಕಾಲೇಜುಗಳು ಮತ್ತು ವಿಭಾಗಗಳಿಂದ 2.75 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ಮತದಾರರು ಈ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಾಲ್ಕು ಪ್ರಮುಖ ಹುದ್ದೆಗಳಿಗೆ ಒಟ್ಟು 21 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆಯ ಫಲಿತಾಂಶಗಳು ಬೆಳಗ್ಗೆ ಹೊರಬೀಳುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande