ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯನ್ನು 2030 ರ ಅಂತ್ಯಕ್ಕೆ ಹುಚ್ಚುನಾಯಿ ರೋಗ(ರೇಬಿಸ್) ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸೆ.30 ರಂದು ರೇಬಿಸ್ ರೋಗದ ಕುರಿತು ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸೆ.30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಆಯುಕ್ತರು, ಜಂಟಿ ಕೃಷಿ ನಿರ್ದೇಶಕರು, ಕಿಮ್ಸ್ ನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವರು. ರೇಬಿಸ್ ರೋಗದ ಕುರಿತು ತಜ್ಞ ವಿಜ್ಞಾನಿಗಳು ಉಪನ್ಯಾಸ ನೀಡುವರು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಪಿ.ಎಂ.ಮಲ್ಲಯ್ಯ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್