ಮಕ್ಕಳನ್ನು ಕಳೆದುಕೊಂಡು ಕುಟುಂಬಸ್ಥರ ಕಣ್ಣೀರು, ಭೀಕರ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವು
ಗದಗ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪ್ಪಳದಿಂದ ಗದಗ ಕಡೆ ಹೊರಟಿದ್ದ ಕಾರು ನಿಯಂತ್ರಣ ತ
ಪೋಟೋ


ಪೋಟೋ


ಪೋಟೋ


ಗದಗ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಪ್ಪಳದಿಂದ ಗದಗ ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ಎದುರುಗಡೆಯಿಂದ ಬರುತ್ತಿದ್ದ ಗೋವಾ ಸರ್ಕಾರದ ಬಸ್‌ಗೆ ಡಿಕ್ಕಿಯಾಗಿದೆ. ಭೀಕರ ರಭಸದ ಡಿಕ್ಕಿಗೆ ಕಾರು ಛಿದ್ರ ಛಿದ್ರಗೊಂಡಿದ್ದು, ಅವಶೇಷಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಅಚ್ಚರಿ ಹೊಡೆದಂತೆ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ಆದರೆ ಕಾರಿನಲ್ಲಿದ್ದ ಮೂವರು ಆಗಲೇ ಪ್ರಾಣ ಕಳೆದುಕೊಂಡಿದ್ದರು.

ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹುನಗುಂದ ಗ್ರಾಮದ ಅರ್ಜುನ್ ನೆಲ್ಲೂರು (29), ಅವರ ಚಿಕ್ಕಪ್ಪ ರವಿ ನೆಲ್ಲೂರು (40) ಹಾಗೂ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿ ಗ್ರಾಮದ ವೀರೇಶ (ಈರಣ್ಣ) ಉಪ್ಪಾರ (32) ಎಂದು ಗುರುತಿಸಲಾಗಿದೆ. ಇವರಲ್ಲಿ ಅರ್ಜುನ್ ಹಾಗೂ ವೀರೇಶ ಇಬ್ಬರೂ ಪೊಲೀಸ್ ಇಲಾಖೆಯ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರೂ ಒಂದೇ ಬ್ಯಾಚ್‌ನ ಸಹೋದ್ಯೋಗಿಗಳಾಗಿದ್ದು, ಶೀಘ್ರದಲ್ಲೇ ಮದುವೆಯಾಗಬೇಕಾಗಿತ್ತು.

ಕುಟುಂಬಗಳು ಮಕ್ಕಳ ವಿವಾಹದ ಕನಸು ಕಾಣುತ್ತಿದ್ದಂತೆಯೇ ಇಂತಹ ದಾರುಣ ಘಟನೆ ಸಂಭವಿಸಿದ್ದು, ಗ್ರಾಮದಲ್ಲಿ ಶೋಕಸಮುದ್ರ ಹರಡಿದೆ. “ಮದುವೆ ಮಂಟಪದಲ್ಲಿ ಮಕ್ಕಳನ್ನು ಕಾಣಬೇಕಾಗಿದ್ದ ಜಾಗದಲ್ಲಿ ಶವಪೆಟ್ಟಿಗೆಯಲ್ಲಿ ನೋಡಬೇಕಾಯ್ತು” ಎಂದು ಕುಟುಂಬಸ್ಥರು ಆಕ್ರಂದನ ವ್ಯಕ್ತಪಡಿಸಿದ್ದಾರೆ.

ಅತೀವೇಗವೇ ಅಪಘಾತಕ್ಕೆ ಕಾರಣವಾ, ಅಥವಾ ಕಾರಿನ ತಾಂತ್ರಿಕ ದೋಷವೋ ಎಂಬುದರ ಕುರಿತು ಗದಗ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande