ಕೋಲಾರ, ೧೯ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಉತ್ತಮ ರೀತಿಯಲ್ಲಿ ಬಾಳಿಕೆ ಬರುವಂತೆ ಹಾಗೂ ಕ್ರೀಡಾಪಟುಗಳಿಗೆ ಉಪಯುಕ್ತವಾದ ರೀತಿಯಲ್ಲಿ ಕ್ರೀಡಾಂಗಣವನ್ನು ಮಾಡಿಕೊಡಬೇಕು ಗುತ್ತಿಗೆದಾರ ಗುಣಮಟ್ಟದ ಕಾಮಗಾರಿಗೆ ಮೊದಲ ಆಧ್ಯತೆ ನೀಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.
ಕೋಲಾರ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಪಕ್ಕದಲ್ಲಿ ಶುಕ್ರವಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ವಲಯದ ೪೫ ಲಕ್ಷ ಅನುದಾನದಲ್ಲಿ ಸಿಂಥೆಟಿಕ್ ಬಾಲ್ ಅಂಕಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಾಮಗಾರಿ ನಡೆಯುವಾಗ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು ಗಮನ ಹರಿಸಬೇಕು ಕಳಪೆ ಕಾಮಗಾರಿ ಕಂಡುಬಂದರೆ ತಡೆದು ಉತ್ತಮ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು ಹಣ ಬಿಡುಗಡೆ ಮಾಡಿದ್ದೇವೆ ಕೆಲಸವೂ ಪ್ರಾರಂಭವಾಗಿದೆ ನಿಮಗೆ ಹೇಗೆ ಬೇಕಾಗುವ ರೀತಿಯಲ್ಲಿ ಮಾಡಿಸಿಕೊಳ್ಳಿ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.
ಸರ್ಕಾರವು ಅನುದಾನ ಬಿಡುಗಡೆ ಮಾಡುತ್ತದೆ ಗುತ್ತಿಗೆದಾರರು ಕಾಲಮೀತಿಯಲ್ಲಿ ಕಾಮಗಾರಿಯನ್ನು ಮುಗಿಸಿಕೊಡಬೇಕು ಯಾವುದೇ ದೂರುಗಳು ಬರಬಾರದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು ಎಂದರು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವೇಮಗಲ್ ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ನಗರಸಭೆ ಸದಸ್ಯ ಅಂಬರೀಷ್, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ವೀರೇಂದ್ರ ಪಾಟೀಲ್, ಕುಮಾರ್, ಚಿನ್ನಾಪುರ ನಾರಾಯಣಸ್ವಾಮಿ, ಕ್ರೀಡಾಪಟುಗಳಾದ ಅಂಚೆ ಅಶ್ವಥ್ ಮುಂತಾದವರು ಇದ್ದರು.
ಚಿತ್ರ : ಕೋಲಾರ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಪಕ್ಕದಲ್ಲಿ ಶುಕ್ರವಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ವಲಯದ ೪೫ ಲಕ್ಷ ಅನುದಾನದಲ್ಲಿ ಸಿಂಥೆಟಿಕ್ ಬಾಲ್ ಅಂಕಣದ ಕಾಮಗಾರಿಗೆ ಶಾಸಕ ಕೊತ್ತೂರು ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್