ಕೊಪ್ಪಳ ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ದದೇಗಲ್‍ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ & ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್
ಕೊಪ್ಪಳ ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ದದೇಗಲ್‍ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ & ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ದರ್ಜೆಯಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಹೊಂದಿದ ಮತ್ತು ಡಿ.ಟಿ.ಡಿ.ಎಮ್ ವಿಭಾಗಕ್ಕೆ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಆಧಾರಿತ ಬಿ.ಇ ಪದವಿ ಹೊಂದಿದ ಆಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 24 ರೊಳಗಾಗಿ ಜಿಟಿಟಿಸಿ ಕೊಪ್ಪಳ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ, ದದೇಗಲ್, ಮೊ.ಸಂ. 7507094445 ಇವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande