ರಾಯಚೂರು, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 500 ಲಕ್ಷ ರೂ.ಗಳ ವೆಚ್ಚದಲ್ಲಿ ರಾಯಚೂರು ತಾಲೂಕಿನ ರಾಂಪೂರು ಕೆರೆ ಅಭಿವೃದ್ಧಿ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ನೇರವಾಗಿ ಕೆರೆ ಪ್ರದೇಶಕ್ಕೆ ತೆರಳಿದ ಸಚಿವರು, ಪೂಜಾ ಕಾರ್ಯಕ್ರಮದ ನಂತರ ಭೂಮಿ ಪೂಜೆ ನೆರವೇರಿಸಿದರು.
ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ರಾಂಪೂರು ಕೆರೆ ಅಭಿವೃದ್ಧಿ ನಡೆಯುತ್ತಿದ್ದು, ಕೆರೆ ಅಭಿವೃದ್ಧಿಗೊಂಡಲ್ಲಿ ಅಂತರ್ಜಲ ವೃದ್ಧಿ ಮತ್ತು ರಾಯಚೂರ ಜನತೆಗೆ ಕುಡಿಯುವ ನೀರು ಪೂರೈಕೆಗೆ ಸಹಕಾರಿಯಾಗಲಿ. ಕಾಮಗಾರಿಯು ಗುಣಮಟ್ಟದಿಂದ ನಡೆಯಬೇಕು ಎಂದು ಇದೆ ವೇಳೆ ಸಚಿವರು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ಪಾಲಿಕೆಯ ಸದಸ್ಯರಾರ ಜಯಣ್ಣ, ಜಿಂದಪ್ಪ ಹಾಗೂ ಮುಖಂಡರಾದ ಕೆ.ಶಾಂತಪ್ಪ, ನರಸಿಂಹಲು ಮಾಡಗಿರಿ ಸೇರಿದಂತೆ ಪಾಲಿಕೆಯ ವಿವಿಧ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್