ಮೈಸೂರು ದಸರಾ ಉದ್ಘಾಟನೆ ವಿವಾದ : ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ವಜಾ
ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಸರಾ ಉದ್ಘಾಟನೆ ವಿವಾದ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ರಾಜ್ಯ ಸರಕಾರ ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಮುಖ್ಯ
Reject


ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದಸರಾ ಉದ್ಘಾಟನೆ ವಿವಾದ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ರಾಜ್ಯ ಸರಕಾರ ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ಕರ್ನಾಟಕ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಅನುಮೋದಿಸಿತ್ತು ಅರ್ಜಿಗಳನ್ನು ವಜಾಗೊಳಿಸಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಎಚ್.ಎಸ್.ಗೌರವ ಎಂಬುವವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ವಜಾ ಮಾಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರ ವ್ಯಕ್ತಿಗೆ ಪೂಜೆಗಳನ್ನು ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ವಾದಿಸಿ. ದೇವಸ್ಥಾನದ ಒಳಗೆ ಪೂಜೆ ಮಾಡುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ. ಇದು ಸಂಪೂರ್ಣವಾಗಿ ರಾಜಕೀಯ. ಧಾರ್ಮಿಕ ಚಟುವಟಿಕೆಗಾಗಿ ಅವರನ್ನು ದೇವಸ್ಥಾನದ ಒಳಗೆ ಕರೆತರಲು ಯಾವುದೇ ಕಾರಣವಿಲ್ಲ ಎಂದು ವಾದ ಮಂಡಿಸಿದರು.

ದಸರಾ ಉದ್ಘಾಟನೆಗೆ ಆಹ್ವಾನಿತರಾದವರು ಹಿಂದೆ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅಂತಹವರನ್ನು ಆಹ್ವಾನಿಸಿರುವುದು ಸರಿಯಲ್ಲ ಎಂದು ಪಿ.ಬಿ.ಸುರೇಶ್‌ ವಾದಿಸಿದರು. ವಾದದ ಸಂದರ್ಭದಲ್ಲೇ ನ್ಯಾಯಮೂರ್ತಿ ನಾಥ್‌ ಅವರು, ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande