ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇಲ್ಲಿ ವಿವಿಧ ವೃತ್ತಿಗಳ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಎಸ್.ಎಸ್.ಎಲ್.ಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಕೊಪ್ಪಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಆಸಕ್ತರು ತಮ್ಮ ಆಧಾರ್ ಕಾರ್ಡ್, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಹಾಗೂ ಮೊಬೈಲ್ ಸಂ: 9449134905, 8660977220, 9008536895, 9448813422, 9742532353, 9945577155, 9945672606 ಇವರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್