ಕೊಪ್ಪಳ ಜಲಮೂಲಗಳ ಸಂರಕ್ಷಣೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಸಂಬ0ಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬ0ಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ : ಜಲಮೂಲಗಳ ಸಂರಕ್ಷಣೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ : ಜಲಮೂಲಗಳ ಸಂರಕ್ಷಣೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ : ಜಲಮೂಲಗಳ ಸಂರಕ್ಷಣೆ : ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಸಂಬ0ಧಿಸಿದ ಇಲಾಖೆಗಳು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಮೂಲಗಳ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಸಂಬ0ಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಕರೆದ ಜಿಲ್ಲೆಯಲ್ಲಿನ ಕೆರೆಗಳ ಒತ್ತುವರಿ ತೆರವು, ಕೆರೆ ಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆ ಕುರಿತು ಜಿಲ್ಲಾ ಮಟ್ಟದ ಅಪೆಕ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಗ್ರಾಮ ಪಂಚಾಯತ್, ಅರಣ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ಜಿಲ್ಲೆಯಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಶೇ.30 ಕ್ಕಿಂತ ಕಡಿಮೆ ನೀರು ಸಂಗ್ರಹಗೊ0ಡಿರುವ ಕೆರೆಗಳ ವಿವರ, ಕೆರೆಗಳ ನೀರಿನ ಗುಣಮಟ್ಟ ಮತ್ತು ನೀರು ಮಲಿನಗೊಂಡಿರುವ ಕೆರೆಗಳ ವಿವರನ್ನು ಸಹ ಸಲ್ಲಿಸಬೇಕು. ಎಲ್ಲಾ ಕೆರೆಗಳ ಅಭಿವೃದ್ಧಿ ಮತ್ತು ಅವುಗಳ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಗ್ಗೆ ಮತ್ತು ಕೆರೆ ಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆ ಕುರಿತಾದ ಪ್ರಸ್ತುತದವರೆಗೂ ಸಾಧಿಸಿದ ಪ್ರಗತಿ ವರದಿಯನ್ನು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸುವಂತೆ ಸೂಚನೆ ನೀಡಿದರು.

ಜಲಮೂಲಗಳನ್ನು ಗುರುತಿಸಿ, ಅವುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಿ, ಅಲ್ಲಿ ಅತಿಕ್ರಮಣ ತಪ್ಪಿಸಬೇಕು. ಕೆರೆಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಸುರಿಯುವುದನ್ನು ತಡೆಯುವುದು ಹಾಗೂ ಇತರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ನೀರಿನ ಗುಣಮಟ್ಟ ಮತ್ತು ಪುನಃ ಸ್ಥಾಪನೆಯನ್ನು ಕಾಪಾಡಿಕೊಳ್ಳಬೇಕು. ಸಂಬ0ಧಿಸಿದ ಇಲಾಖೆ, ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಜಲಮೂಲಗಳ ರಕ್ಷಣೆಗೆ ನಾನಾ ಮೂಲಗಳಿಂದ ಲಭ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ಕೆರೆಗಳ ಸಂರಕ್ಷಣೆಗೆ ಜನ ಸಮುದಾಯಕ್ಕೆ ಅರಿವು ಮೂಡಿಸುವುದರ ಜೊತೆಗೆ ಅವರನ್ನು ಈ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದರು.

ಕೆರೆಗಳಲ್ಲಿ ವಾಹನಗಳನ್ನು ತೊಳೆಯುವುದು ಮತ್ತು ಜಾನುವಾರುಗಳ ಮೈ ತೊಳೆಯುವುದನ್ನು ತಡೆಗಟ್ಟಬೇಕು. ಇದಕ್ಕಾಗಿ ಪ್ರತ್ಯೇಕ ತೊಟ್ಟಿಯನ್ನು ನಿರ್ಮಿಸುವಂತೆ ಆಯಾ ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು. ಎಲ್ಲಿ ನೀರು ಕಲುಷಿತವಾಗಿದೆ ಅದನ್ನು ಗುರುತಿಸಿ, ನೀರು ಶುದ್ಧೀಕರಿಸಲು ಸೂಕ್ತ ಕ್ರಮ ವಹಿಸಬೇಕು. ಪ್ರಸ್ತುತ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಇದಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಿಕೊಡಬೇಕು. ಜಲಮೂಲಗಳಲ್ಲಿ ಯಾವುದೇ ರೀತಿಯ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿ.ಪಂ ಯೋಜನಾ ನಿರ್ದೇಶಕ ಪ್ರಕಾಶ ವಿ., ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಎಸ್. ಕವಲೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಪ್ಪಳ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ವೈ.ಎಸ್. ಹರಿಶಂಕರ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande