ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ತಲೆ ಬುರುಡೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಪ್ರತಿಪಕ್ಷಗಳ ಆಗ್ರಹಕ್ಕೆ ಗೃಹ ಸಚಿವ ಜಿ.ಪರಮೇಶ್ವರ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಎಸ್ಐಟಿ ತನಿಖೆಯ ಹಂತದಲ್ಲಿದೆ. ವರದಿ ಇನ್ನೂ ಬಂದಿಲ್ಲ. ಈ ಸಂದರ್ಭದಲ್ಲಿ ಎನ್‌ಐಎ ತನಿಖೆಗೆ ನೀಡುವ ಪ್ರಶ್ನೆಯೇ ಇಲ್ಲ. ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಪಕ್ಷಗಳು ಮಾಡುತ್ತಿರುವ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಬಿಜೆಪಿ ಪದೇ ಪದೇ ಎಸ್ಐಟಿ ತನಿಖೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ನಡೆ ನೋಡಿದರೆ ತನಿಖೆಗೆ ಅಡ್ಡಿಪಡಿಸುತ್ತಿರುವಂತೆಯೇ ಕಾಣಿಸುತ್ತಿದೆ. ಆದರೆ ಎಸ್ಐಟಿ ತನಿಖೆಯಲ್ಲೇ ಯಾವುದೇ ಲೋಪವಿಲ್ಲ. ತನಿಖೆ ಪೂರ್ಣಗೊಂಡು ವರದಿ ಬರುವವರೆಗೆ ಬೇರೆ ತನಿಖೆಯ ಅಗತ್ಯ ಇಲ್ಲ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa