ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತಿಹಾಸ ಪುಟ ಸೇರಿದ್ದು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಸರ್ಕಾರದ ಆದೇಶದಂತೆ ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ.
ಸಿಲಿಕಾನ್ ಸಿಟಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟವೆಂದು ಸರ್ಕಾರ ಹೊಸ ಪ್ರಾಧಿಕಾರವನ್ನು ರಚಿಸಿತು. ಇದರಡಿ ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಮಹಾನಗರ ಪಾಲಿಕೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ. ಒಟ್ಟು ೨೮ ವಿಧಾನ ಸಭಾ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದೆ.
ಹೊಸ ವ್ಯವಸ್ಥೆಯಡಿ 15 ಐಎಎಸ್, 20 ಕ್ಕೂ ಹೆಚ್ಚು ಕೆಎಎಸ್ ಹಾಗೂ 2 ಐಪಿಎಸ್ ಅಧಿಕಾರಿಗಳ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ನಾಮಫಲಕಗಳನ್ನು ಹಂತ ಹಂತವಾಗಿ ಬದಲಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa