ಕೆ.ಎನ್.ರಾಜಣ್ಣ ಬಿಜೆಪಿ ಸಂಪರ್ಕದಲ್ಲಿ : ಶಾಸಕ ಬಾಲಕೃಷ್ಣ
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು. ಮಾತು ಮನೆ ಕೆಡಿಸಿತು,
ಕೆ.ಎನ್.ರಾಜಣ್ಣ ಬಿಜೆಪಿ ಸಂಪರ್ಕದಲ್ಲಿ : ಶಾಸಕ ಬಾಲಕೃಷ್ಣ


ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ

ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬಂತೆ ಆಗಿದೆ. ಇದರಲ್ಲಿ ನಮ್ಮ ಪಕ್ಷದ ನಾಯಕರ ಷಡ್ಯಂತ್ರ ಇಲ್ಲ. ಆದರೆ ಕಾಂಗ್ರೆಸ್‌ ವಿರುದ್ಧ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

ದೆಹಲಿ ಸಮಾವೇಶ ಮಾಡಿದರೆ ನಾವು ಹಿಡಿದುಕೊಳ್ಳಲು ಆಗುವುದಿಲ್ಲ, ರಾಜಣ್ಣನವರ ಮಂಪರು ಪರೀಕ್ಷೆ ಮಾಡಲಿ, ಯಾರೊಂದಿಗೆ ಸಂಪರ್ಕದಲ್ಲಿದ್ದಾರೆಂದು ತಿಳಿಯುತ್ತದೆ. ನಮ್ಮ ಸರಕಾರ ಇರುವುದರಿಂದ ಅವರು ಇಲ್ಲಿಯೇ ಇದ್ದಾರೆ. ಆದರೆ ಅವರು ಬೇರೆ ಬೇರೆ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande