ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ. ಕೊಪ್ಪಳ ಜಿಲ್ಲಾ ಮಟ್ಟದಲ
ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ


ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ.

ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಥ್ರೋಬಾಲ್, ಕಬಡ್ಡಿ, ಯೋಗಾಸನ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಕುಸ್ತಿ ಮತ್ತು ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ.

ಜಿಲ್ಲಾ ಮಟ್ಟದಲ್ಲಿ ಟೆನ್ನಿಸ್, ನೆಟ್‌ಬಾಲ್, ಈಜು ಸ್ಪರ್ಧೆಗಳನ್ನು ಆಯ್ಕೆ ಮಾಡಲಾಗುವುದು.

ತಾಲ್ಲೂಕು ಮಟ್ಟದಲ್ಲಿ ಜರುಗಿದ ದಸರಾ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ಕಡ್ಡಾಯವಾಗಿ ಅನ್‌ಲೈನ್‌ನಲ್ಲಿ ನೋಂದಣಿಯಾದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ದಿನಭತ್ಯೆ ಹಾಗೂ ಪ್ರಯಾಣ ಭತ್ಯೆ ನೀಡಲಾಗುವುದು.

ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಡ್ಡಾಯವಾಗಿ ನೋಂದಣಿ ಪ್ರತಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಮತ್ತು ಆಧಾರ್‌ಕಾರ್ಡ್(ಜೆರಾಕ್ಸ್) ಸಲ್ಲಿಸತಕ್ಕದ್ದು.

ತಾಲ್ಲೂಕು ಮಟ್ಟದಲ್ಲಿ ವಿಜೇತರಾದಂತಹ ಕ್ರೀಡಾಪಟುಗಳು ಕಡ್ಡಾಯವಾಗಿ ನೋಂದಣಿಯಾಗಿದ್ದಲ್ಲಿ ಮಾತ್ರ ಜಿಲ್ಲಾ ಮಟ್ಟದಲ್ಲಿ ಕ್ರೀಡೆಗಳಲ್ಲಿ ಪರಿಗಣಿಸಲಾಗುವುದು.

ಒಂದು ವೇಳೆ ನೋಂದಣಿಯಾಗದೇ ಇದ್ದಲ್ಲಿ, ಅಂತಹ ಕ್ರೀಡಾಪಟುಗಳನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪರಿಗಣಿಸಲಾಗುವುದಿಲ್ಲ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಜರುಗಿದಲ್ಲಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳರವರು ಆ ತಂಡಗಳನ್ನು ಕ್ರೀಡಾಕೂಟದಿಂದ ರದ್ದುಪಡಿಸುವ ಅಧಿಕಾರ ಹೊಂದಿರುತ್ತಾರೆ ಮತ್ತು ಅವರ ನಿರ್ಣಯವೇ ಅಂತಿಮವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ, ಇಲಾಖೆಯ ತರಬೇತುದಾರರು ಹಾಗೂ ಸಿಬ್ಬಂದಿಗಳಾದ ಬಿ.ಕೀರ್ತಿವರ್ಧನ-7676343554, ಯತಿರಾಜ್-9448633146, ತುಕಾರಾಂ ರಂಜಪಲ್ಲಿ- 8197398600, ಸುರೇಶ-9901527333, ವಿಶ್ವನಾಥ ಕರ್ಲಿ-8660455969, ದೀಪಾ-8088143003 ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande