ಗದಗ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ 6 ರ ಶನಿವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಗದಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP