ಕೊಪ್ಪಳ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ “Elevate (Minorities) 2025” ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಜಿದಾರರು ಅಧಿಕೃತ ವೆಬ್‌ಸೈಟ್ eitbt.karnataka.gov.in ಮುಖಾಂತರ ಸೆಪ್ಟೆಂಬರ್ 15 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22231007 ಗೆ ಸಂಪರ್ಕಿಸಬಹುದು ಅಥವಾ elevate-ktech@ka.gov.in ಗೆ ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್