ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಆಗಸ್ಟ್ 30ರಂದು ನಡೆದ ವಿಚಾರಣೆಯಲ್ಲಿ, ಪವಿತ್ರಾ ಗೌಡ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದರು.
ಅವರು, “ಆರೋಪಪಟ್ಟಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ಸಲ್ಲಿಕೆಯಾಗಿದೆ. ಇದು ಕಾನೂನು ಬಾಹಿರ. ಬದಲಿಗೆ ಭಾರತ ದಂಡ ಸಂಹಿತೆ ಅಡಿಯಲ್ಲಿ ಸಲ್ಲಿಕೆ ಮಾಡಬೇಕಾಗಿತ್ತು. ಹೀಗಾಗಿ ಕಡ್ಡಾಯ ಜಾಮೀನಿಗೆ ಪವಿತ್ರಾ ಗೌಡ ಅರ್ಹರು ಎಂದು ವಾದಿಸಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಸೆಪ್ಟೆಂಬರ್ 2ಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು ಹೊರಬಂದ ತೀರ್ಪಿನಲ್ಲಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಂಡಿದೆ.
ಗಮನಾರ್ಹವಾಗಿ, ಆಗಸ್ಟ್ 14ರಂದು ಈ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa