ನವದೆಹಲಿ, 2 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ . ಸಿಟಿ ಯೂನಿಯನ್ ಬ್ಯಾಂಕಿನ 120ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿಗಳು ಬೆಳಿಗ್ಗೆ 11:40 ಕ್ಕೆ ಮೈಸೂರಿನಿಂದ ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ಚೆನ್ನೈ ಹಳೆಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ, ರಸ್ತೆ ಮಾರ್ಗದ ಮೂಲಕ ನಂದಂಬಕ್ಕಂ ಟ್ರೇಡ್ ಸೆಂಟರ್‌ಗೆ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ ಅವರು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಮೂರು ದಿನಗಳ ಕರ್ನಾಟಕ–ತಮಿಳುನಾಡು ಪ್ರವಾಸದ ಕೊನೆಯ ದಿನವಾದ ಸೆಪ್ಟೆಂಬರ್ 3 ರಂದು, ರಾಷ್ಟ್ರಪತಿ ಮುರ್ಮು ಅವರು ತಿರುವರೂರಿನಲ್ಲಿ ತಮಿಳುನಾಡು ಕೇಂದ್ರೀಯ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa