ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಭಾರತ ಭೇಟಿ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಿಂಗಾಪುರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಲಾರೆನ್ಸ್ ವಾಂಗ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಮಂಗಳವಾರ ಅವರು ಪತ್ನಿ, ಕ್ಯಾಬಿನೆಟ್ ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗದೊಂದಿಗೆ
Singapore pm


ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಿಂಗಾಪುರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಲಾರೆನ್ಸ್ ವಾಂಗ್ ಅವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಮಂಗಳವಾರ ಅವರು ಪತ್ನಿ, ಕ್ಯಾಬಿನೆಟ್ ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗದೊಂದಿಗೆ ನವದೆಹಲಿಗೆ ಆಗಮಿಸಿದರು. ಈ ಪ್ರವಾಸವು ಸೆಪ್ಟೆಂಬರ್ 2ರಿಂದ 4ರವರೆಗೆ ಮುಂದುವರಿಯಲಿದೆ.

ವಿದೇಶಾಂಗ ಸಚಿವಾಲಯದ ಪ್ರಕಾರ, ಭಾರತ-ಸಿಂಗಾಪುರ ರಾಜತಾಂತ್ರಿಕ ಸಂಬಂಧಗಳ 60ನೇ ವಾರ್ಷಿಕೋತ್ಸವದ ಅಂಗವಾಗಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ವಾಂಗ್ ಅವರು ಗುರುವಾರ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿಷಯಗಳ ಕುರಿತ ಚರ್ಚೆಯೂ ನಡೆಯಲಿದೆ.

ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ವಾಂಗ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಹಾಗೂ ಇತರ ಗಣ್ಯರನ್ನು ಭೇಟಿಯಾಗಲಿದ್ದಾರೆ.

ಭಾರತದ ಆಕ್ಟ್ ಈಸ್ಟ್ ನೀತಿಯಲ್ಲಿ ಸಿಂಗಾಪುರ ಪ್ರಮುಖ ಪಾಲುದಾರ. ಕಳೆದ ವರ್ಷ (ಸೆಪ್ಟೆಂಬರ್ 2024) ಪ್ರಧಾನಿ ಮೋದಿ ಅವರ ಸಿಂಗಾಪುರ ಪ್ರವಾಸದಲ್ಲಿ, ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ನಿರ್ಧಾರ ಕೈಗೊಳ್ಳಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande