ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದಲ್ಲಿ ರಸ್ತೆಗಳ ಗುಂಡಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಸಮಸ್ಯೆಗಳನ್ನು ಬಗೆಹರಿಸಲು ಇದ್ದೇವೆ, ಬಿಜೆಪಿ ಪಕ್ಷವು ರಾಜಕೀಯ ಮಾಡುತ್ತಿದೆ. ಮುಖ್ಯಮಂತ್ರಿ ಕೂಡ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಟ್ರಾಫಿಕ್ ಹೆಚ್ಚು, ಮಳೆಯ ಪರಿಣಾಮದಿಂದ ರಸ್ತೆಗಳು ಗುಂಡಿ ಗೊಳ್ಳುತ್ತಿವೆ ಎಂದು ವಿವರಿಸಿದರು.
ಈಗಾಗಲೇ 7,000ಕ್ಕೂ ಹೆಚ್ಚು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಮತ್ತು ಇನ್ನೂ 5,000 ಗುಂಡಿ ಬಾಕಿಯಿವೆ. ಸಾರ್ವಜನಿಕರು ಮತ್ತು ಪೊಲೀಸರು ಕೂಡ ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ರಾಜಕೀಯ ಮಾಡುವವರು ರಾಜಕೀಯ ಮಾಡಲಿ, ನಾವು ಪರಿಹಾರ ನೀಡುತ್ತೇವೆ. ಯಾವುದೇ ಪಕ್ಷದ ಶಾಸಕರ ಕ್ಷೇತ್ರದ ಕುರಿತು ತಾರತಮ್ಯ ಇಲ್ಲದೆ ಅನುದಾನ ನೀಡಲಾಗಿದೆ. ಇತ್ತೀಚೆಗಷ್ಟೇ 25 ಕೋಟಿ ರೂ. ಅನುದಾನ ನೀಡಿದ್ದೇವೆ, ಎಂದು ಶಿವಕುಮಾರ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa