ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಿಜಯಪುರ ವತಿಯಿಂದ ಇಬ್ರಾಹಿಂಪೂರದಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.6ರ ಆವರಣದಲ್ಲಿ “ಚಿಗುರು” ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರು ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ. ವಿದ್ಯಾರ್ಥಿಗಳು ತಮ್ಮ ಸರ್ವೋತಮ ಬೆಳವಣಿಗೆಗೆ ಪಠ್ಯೇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಮಾತಾನಾಡಿ ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಸಾಂಸ್ಕೃತಿಕ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಮೀರ ಶೇಖ ಹಾಗೂ ಸಂಗಡಿಗರು ಸುಗಮ ಸಂಗೀತ, ಕೃμÁ್ಣಬಾಳಪ್ಪ ತಳವಾರ ಹಾಗೂ ಸಂಗಡಿಗರು ವಿಜಯಪುರ ಶಾಸ್ತ್ರೀಯ ಸಂಗೀತವನ್ನು, ತಿಕೋಟಾ ಜನಪದ ಗೀತೆಗಳ ಗಾಯನವನ್ನು ಸಪ್ತಕ ಆನಂದ ಹೊನವಾಡ ಹಾಗೂ ಸಂಗಡಿಗರು ನಡೆಸಿಕೊಟ್ಟರು.
ಪದ್ಮಾ ಕಾಖಂಡಕಿ ಹಾಗೂ ಸಂಗಡಿಗರು ಸಮೂಹ ನೃತ್ಯವನ್ನು, ಪ್ರತೀಕ್ಷಾ ಚೌರಿ ಹಾಗೂ ಸಂಗಡಿಗರು ಯಕ್ಷಗಾನವನ್ನು, ಸಂಜೀವಿನಿ ಸಂಕಣ್ಣವರ ಹಾಗೂ ಸಂಗಡಿಗರು ಏಕಪಾತ್ರಾಭಿನಯವನ್ನು ಪ್ರದರ್ಶಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಎಸ್.ಜೆ.ಬಿರಾದಾರ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಶಿವಾನಂದ ಬ್ಯಾಹಟ್ಟಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಆರ್.ಎಸ್.ಪಾದಗಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande