ಸಾಮೂಹಿಕ ಸ್ವಚ್ಛತಾ ಶ್ರಮದಾನ
ಗದಗ, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ಪ್ರತಿ ವರ್ಷ ಅಕ್ಟೋಬರ್ 2ನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಅಲ್ಲಲ್ಲಿ ಹಮ್ಮಿಕೊಳ್ಳಲಾಗುತ್ತಿದ
ಪೋಟೋ


ಗದಗ, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ಪ್ರತಿ ವರ್ಷ ಅಕ್ಟೋಬರ್ 2ನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ ಶ್ರಮದಾನಗಳನ್ನು ಅಲ್ಲಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಗಳ ಸಚಿವಾಲಯ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ 'ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025' ಅಭಿಯಾನವನ್ನು 'ಸ್ವಚೋತ್ಸವ' ಎಂಬ ಘೋಷವ್ಯಾಕ್ಯದೊಂದಿಗೆ ಆಚರಿಸುತ್ತಿದೆ.

ಸದರ ಕಾರ್ಯಕ್ರಮದಡಿ ತಾಲೂಕಿನ ಬೆಳಟ್ಟಿ ಗ್ರಾಮದಲ್ಲಿ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಮೂಡಿಸುವ ಜಾಥಾಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷರು ಚಾಲನೆ ನೀಡಿ, ಸ್ವಚ್ಚತೆಯ ಪ್ರತಿಜ್ಞಾವಿಧಿ ಬೋಧಿಸಿ ಸಮಾರಂಭದಲ್ಲಿ ಸ್ವಚ್ಛ ವಾಹಿನಿ ವಾಹನ ಚಾಲಕಿ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವ ಸಫಾಯಿ ಕರ್ಮಚಾರಿಗಳಿಗೆ ಸನ್ಮಾನ ಮಾಡಲಾಯಿತು. ಗ್ರಾಮ ಪಂಚಾಯತ ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಆಶಾ ಅಂಗನವಾಡಿ ಕಾರ್ಯಕರ್ತೆಯರು ಬಾಗವಹಿಸಿ ಯಶಸ್ವಿಗೊಳಿಸಿದರು

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande