ಗದಗ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜೀವನದಲ್ಲಿ ಅನೇಕ ಏಳುಬೀಳುಗಳನ್ನು ದಾಟಿ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸದ್ಯ ನಿವೃತ್ತ ಜೀವನ ನಡೆಸುತ್ತಿರುವ ಹಿರಿಯಜೀವಗಳು ಇಳಿ ವಯಸ್ಸಿನಲ್ಲಿ ಸದಾ ಖುಷಿಯಿಂದ ಇರಬೇಕಾಗುತ್ತದೆ. ಜೀವನದಲ್ಲಿ ಮಕ್ಕಳಿಂದ ಅಥವಾ ಇತರೆ ಯಾವುದೇ ರೀತಿಯಿಂದ ತಮಗೆ ಸಮಸ್ಯೆ ಎದುರಾದರೆ ಅವರ ಸಮಸ್ಯೆ ನಿವಾರಿಸುವುದರ ಜೊತೆಗೆ ಹಿರಿಯ ರಕ್ಷಣೆಗಾಗಿ ಕಾನೂನು ಸೇವೆಗಳ ಪಾಧಿಕಾರ ಕಾರ್ಯ ನಿರ್ವಹಿಸಿ ನ್ಯಾಯ ಒದಗಿಸುತ್ತದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾಸಂಸ್ಥೆ ಮತ್ತು ಸಂಘಗಳು ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2025 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯರಿಗಾಗಿ ಏರ್ಪಡಿಸಿದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಹಿರಿಯನ್ನು ಯಾವಾಗಲೂ ಗೌರವಿಸುವ ಕಾಯಕ ನಡೆಯಬೇಕು. ಹಿರಿಯರಲ್ಲಿ ನಾವು ದೇವರನ್ನು ಕಾಣಬೇಕು. ಹಿರಿಯ ಜೀವಿಗಳು ವೃದ್ದಾಶ್ರಮದಲ್ಲಿ ಇರುವಂತಾಗಬಾರದು. ಈ ಕುರಿತು ಗಂಭೀರ ಚಿಂತನೆಯಾಗಬೇಕೆAದು ಹೇಳಿ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸೂಕ್ತ ಎಂದು ಹೇಳಿ ಶುಭ ಹಾರೈಸಿದರು.
ಪ್ರೊ. ಕೆ.ಎಚ್.ಬೇಲೂರ ಮಾತನಾಡಿ ಸರಕಾರದ ಸೌಲಭ್ಯ ಪಡೆದುಕೊಳ್ಳಲು ಹಿರಿಯರು ಮುಂದಾಗಬೇಕು. ನಿವೃತ್ತಿಯ ಜೀವನ ಸದಾ ನೆಮ್ಮದಿಯಿಂದ ಕೂಡಿರಬೇಕೆಂದರು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಮಹಾಂತೇಶ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇಲಾಖೆಯ ಯೋಜನೆಗಳ ಕುರಿತು ವಿವರಿಸಿದರು.
ನಿವೃತ್ತ ಶಿಕ್ಷಕರಾದ ಸಜ್ಜನರ ಪ್ರಾರ್ಥಿಸಿದರು. ನಂತರ ಜರುಗಿದ ಹಿರಿಯ ನಾಗರಿಕರ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ದಿವಾಣಿ ನ್ಯಾಯಾದೀಶರಾದ ಸಿ.ಎಸ್.ಶಿವನಗೌಡ್ರ ಉದ್ಘಾಟಿಸಿ ಕ್ರೀಡೆಗಳಿಗೆ ಚಾಲನೆ ನೀಡಿದರು. ಎಂ.ಸಿ. ಒಗ್ಗಿ ಕಾರ್ಯಕ್ರಮ ನಿರೂಪಿಸಿದರು. ಆರ್.ಟಿ. ನಾರಾಯಣಪುರ ವಂದಿಸಿದರು. ಖಂಡೆಪ್ಪಗೌಡ್ರ , ಜಿ.ಎಸ್.ಹಿರೇಮಠ, ಮಾಲಗಿತ್ತಿ ಮಠ, ಪ್ರಕಾಶ ಉಪನಾಳ ಸೇರಿದಂತೆ ಹಿರಿಯ ನಾಗರಿಕರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP