ಬಳ್ಳಾರಿ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ, ತೊಗರಿ, ಶೇಂಗಾ, ಸಜ್ಜೆ, ಸೂರ್ಯಕಾಂತಿ, ಉದ್ದು, ಜೋಳದ ಫಸಲು ಉತ್ತಮವಾಗಿ ಬಂದಿದ್ದು ಸರ್ಕಾರ ರಾಜ್ಯಾದ್ಯಂತ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ಶೀಘ್ರದಲ್ಲೆ ತೆರೆಯಬೇಕು ಎಂದು ಕನ್ನಡನಾಡು ರೈತ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಸಂಘದ ಅಧ್ಯಕ್ಷ ಮೆಣಸಿನ ಈಶ್ವರಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮುಂಗಾರು ಹಂಗಾಮಿನ ಕೊಯ್ಲು ಯಾವುದೇ ಸಂದರ್ಭದಲ್ಲಿ ಮಾರುಕಟ್ಟೆಯನ್ನು ತಲುಪಲಿದೆ. ಕಾರಣ ಸರ್ಕಾರ ತ್ವರಿತವಾಗಿ ಖರೀದಿ ಕೇಂದ್ರಗಳನ್ನು ತೆರೆಯುವ ಮೂಲಕ ರೈತರು ಮತ್ತು ರೈತರ ಆರ್ಥಿಕ ಸ್ಥಿರತೆಗೆ ನೆರವಾಗಬೇಕು ಎಂದು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್