ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ನಿಗಮದಿಂದ ನೇರ ಸಾಲ ಯೋಜನೆ, ಡಾ. ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆ, ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಞಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟç, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದ್ದು, ಆನ್‌ಲೈನ್ ಅರ್ಜಿಗಳನ್ನು https://sevasindhu.karnataka.gov.in ಮೂಲಕ ಸಲ್ಲಿಸಬೇಕು. ನಂತರ ಅರ್ಜಿಯ ಪ್ರತಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08392-271741, 9844667691 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್