ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರ ವರೆಗೂ ನಡೆಯಲಿದೆ ಎಂದು ಮಾಜಿ ಶಾಸಕ ದೇವಾನಂದ್ ಚವ್ಹಾಣ ಹೇಳಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತವಾಗಿ 54 ವರ್ಷಗಳಿಂದ ಈ ಉತ್ಸವವನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಮಾಡಿಕೊಂಡು ಬರಲಾಗುತ್ತಿದೆ. ಅಲ್ಲದೇ, ಅಂದಿನಿಂದ 2001 ಕುಂಬಮೇಳ, ರೇಝೀಮ ಕುಣಿತ,ನಾಸಿಕ ಡೋಲ, ಡಿಜೆ ಸೌಂಡ್, ನವಿಲು ಕುಣಿತ ಹೀಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande