ಪುಂಡಾನೆ ಸೆರೆ ಹಿಡಿಯಲು ಕರ್ನಾಟಕದ ನೆರವು ಕೋರಿದ ಗೋವಾ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರ ನೇತೃತ್ವದ ನಿಯೋಗ ಇಂದು ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಗೋವಾದಲ್ಲಿ ಕೃಷಿಗೆ ಹಾನಿ ಮಾಡುತ್ತಿರುವ ''''ಓಂಕಾರ'''' ಎಂಬ ಪುಂಡಾನೆಯನ್ನು ಸೆರೆ ಹಿಡಿಯಲು
Met


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರ ನೇತೃತ್ವದ ನಿಯೋಗ ಇಂದು ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಗೋವಾದಲ್ಲಿ ಕೃಷಿಗೆ ಹಾನಿ ಮಾಡುತ್ತಿರುವ ''ಓಂಕಾರ'' ಎಂಬ ಪುಂಡಾನೆಯನ್ನು ಸೆರೆ ಹಿಡಿಯಲು ಕರ್ನಾಟಕದ ಸಹಕಾರವನ್ನು ಕೋರಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಖಂಡ್ರೆ ಕರ್ನಾಟಕ ಅರಣ್ಯ ಇಲಾಖೆ ಆನೆ ಸೆರೆ ಕಾರ್ಯಚರಣೆಯಲ್ಲಿ ಪರಿಣತಿಯನ್ನು ಹೊಂದಿದ್ದು, ದಸರಾ ಮಹೋತ್ಸವದ ಬಳಿಕ ನಮ್ಮ ತಜ್ಞರು ತಂಡ ಗೋವಾಕ್ಕೆ ತೆರಳಿ ಕಾರ್ಯಾಚರಣೆ ನಡೆಸುವ ಬಗ್ಗೆ ಭರವಸೆ ನೀಡಿದ್ದೇನೆ. ಆದರೆ, ಕುಮ್ಕಿ ಆನೆಗಳನ್ನು ನೀಡುವಂತೆ ಗೋವಾ ಸರಕಾರದ ಮನವಿಯನ್ನು ತಳ್ಳಿಹಾಕಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಕಳಸಾ-ಬಂಡೂರಿ ಯೋಜನೆಗೆ ಗೋವಾ ಸರಕಾರ ಸಹಕರಿಸಬೇಕೆಂದು ವಿನಂತಿಸಿದ್ದು. ಅಭಿವೃದ್ಧಿ ಹಾಗೂ ಮೂಲಸೌಕರ್ಯ ವಿಚಾರದಲ್ಲಿ ನೆರೆಯ ರಾಜ್ಯಗಳು ಪರಸ್ಪರ ಔದಾರ್ಯದಿಂದ ಇರಬೇಕು ಎಂಬ ಅಭಿಪ್ರಾಯವನ್ನು ಹಂಚಿಕೊಳ್ಳಲಾಗಿದೆ. ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಉತ್ತಮ ಸಹಕಾರ ಮತ್ತು ಬಾಂಧವ್ಯವನ್ನು ವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande