ಕೊಪ್ಪಳ : ಸೆ.22 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ
ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2025'' ಕಾರ್ಯಕ್ರಮವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನ
ಕೊಪ್ಪಳ : ಸೆ.22 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ


ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2025' ಕಾರ್ಯಕ್ರಮವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಸೆ. 22ರ ಸೋಮವಾರದಂದು ಸಂಜೆ 6.30 ಗಂಟೆಗೆ ನಡೆಯಲಿದೆ.

ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸುವರು.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರು ಹಾಗೂ ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ, ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಸದಸ್ಯರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರ ಸದಸ್ಯರಾದ ಬಸವರಾಜ ರಾಯರೆಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.

ಗೌರವ ವಿಶೇಷ ಆಹ್ವಾನಿತರಾಗಿ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹುಲಿಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ ಅವರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್‌ರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಡಾ. ಎಂ.ವಿ.ವೆಂಕಟೇಶ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯಂ.ಹೆಚ್. ಪ್ರಕಾಶ್‌ರಾವ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande