ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು-ಸಚಿವ ಎಂ.ಬಿ.ಪಾಟೀಲ ಸೂಚನೆ
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕ
ಪಾಟೀಲ


ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.

ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ. ಮಳೆ ನೀರು ಚರಂಡಿ ನಿರ್ಮಾಣ ಕಾರ್ಯ ಕೈಗೊಂಡು ಎಲ್ಲಿಯೂ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಕಷ್ಟ-ಕಾರ್ಪಣ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಇಂತಹ ಪ್ರದೇಶದಲ್ಲಿ ಕಾಮಗಾರಿಗಳನ್ನು ಕೈಗೊಂಡು, ಸಮಸ್ಯೆ ಮರುಕಳಿಸದಂತೆ ಶಾಶ್ವತವಾಗಿ ಸಮಸ್ಯೆಗೆ ಪರಿಹಾರ ದೊರಕಿಸಲು ಸೂಕ್ತ ಕ್ರಿಯಾಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ನಾಗರಿಕ ಸೌಲಭ್ಯದ ನಿವೇಶಗಳನ್ನು ನೀಡುವಾಗ ಸರ್ಕಾರಿ ಶಾಲೆಗಳಿಗೆ ಮೊದಲಾದ್ಯತೆ ನೀಡಬೇಕು. ಅವಶ್ಯಕತೆಯನುಸಾರ ನಾಗರಿಕ ಸೌಲಭ್ಯದ ನಿವೇಶನಗಳನ್ನು ಹಂಚಿಕೆ ಮಾಡಬೇಕು. ಕೆರೆ ಅಭಿವೃದ್ದಿ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಸೂಚಿಸಿದ ಸಚಿವರು, ಹಂಚಿನಾಳ ಕೆರೆ ಅಭಿವೃದ್ದಿ ಪುನಶ್ಚೇತನ ಕಾರ್ಯ ಕೈಗೊಂಡು ಕೆರೆ ನೀರು ಶುದ್ಧೀಕರಣಗೊಳಿಸುವ ಕಾರ್ಯ ಕೈಗೊಂಡು, ಕಲುಷಿತ ನೀರಿನಿನದ ಅಲ್ಲಿನ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಹಂಚಿನಾಳ ಕೆರೆ 9.50 ಕೋಟಿ ರೂ. ಅನುದಾನದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಕೆರೆಯ ಹೂಳು ತೆಗೆಯುವುದು ಸೇರಿದಂತೆ ಒಟ್ಟಾರೆ ಗುಣಮಟ್ಟದಿಂದ ಕೂಡಿದ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.

ನಗರದಲ್ಲಿರುವ ಐತಿಹಾಸಿಕ ಬಾವಡಿಗಳನ್ನು ಸ್ವಚ್ಛಗೊಳಿಸಿ ಅಲ್ಲಿಯ ನೀರನ್ನು ಸಾರ್ವಜನಿಕರ ಗೃಹ ಬಳಕೆಗೆ ಪೂರೈಕೆ ಮಾಡಿದ್ದಲ್ಲಿ, ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಹಾಗೂ ಬಾವಡಿಗಳ ನೀರು ಗೃಹ ಬಳಕೆ ಉಪಯೋಗಿಸಿದಾಗ ಈ ಬಾವಡಿಗಳ ಸ್ವಚ್ಛತಾ ಯೋಜನೆಗೆ ಸಾರ್ಥಕತೆ ದೊರೆಯುತ್ತದೆ. ನಗರದ ಹೊರವಲಯದ ರಂಭಾಪುರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು, ಗೃಹ ಬಳಕೆಗೆ ಬಾವಡಿಗಳ ಉಪಯೋಗ ಮಾಡುತ್ತಿರುವದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವುದಿಲ್ಲ ಹಾಗಾಗಿ ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಪಾಲಿಕೆ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅತಿಕ್ರಮಣಗೊಂಡ ಉದ್ಯಾನವನಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ಒತ್ತುವರಿ ತೆರವುಗೊಳಿಸುವ ಮುನ್ನ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕ್ರಮ ವಹಿಸಬೇಕು. ಈಗಾಗಲೇ ಕೈಗೊಂಡಿರುವ ಕಾಮಗಾರಿಗಳಲ್ಲಿ ಪ್ರಮುಖ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಅತ್ಯಂತ ಅವಶ್ಯವಿದ್ದೆಡೆ ಹೈಮಾಸ್ಕ ದೀಪ ಅಳವಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಸಮನ್ವಯದಿಂದ ಕಾರ್ಯನಿರ್ವಹಿಸಿ ನಿಗದಿತ ಅನುದಾನ ಬಳಕೆ ಮಾಡಿಕೊಂಡು ನಗರದ ಸಮಗ್ರ ಅಭಿವೃದ್ದಿ ದೃಷ್ಟಿಯಿಂದ ಕಾರ್ಯಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಬೇಕು. ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ನಿಗಾವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ನಗರದ ವಾಹನ ದಟ್ಟಣೆ ನಿರ್ವಹಣೆ-ಸುಗಮ ಸಂಚಾರಕ್ಕಾಗಿ ಹಾಗೂ ವೃತ್ತಗಳನ್ನು ಅಭಿವೃದ್ಧಿಪಡಿಸುವ IಖಿಒಇS ಯೋಜನೆಯಂತೆ ಕಾಮಗಾರಿಯನ್ನು ಅನುμÁ್ಠನಗೊಳಿಸಲು ಅನುಮೋದನೆ ನೀಡಿ, ಕ್ರಮ ವಹಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ, ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಅಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ನಗರದಲ್ಲಿ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಡಾ.ಆನಂದ ಕೆ., ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪ್ರಾಧಿಕಾರದ ಸದಸ್ಯರಾದ ಮಹಾದೇವ ರಾಠೋಡ, ಸಂತೋಷ ಪವಾರ, ಸಲೀಮ ಪೀರಜಾದೆ, ಶ್ರೀಮತಿ ಕಾಶಿಬಾಯಿ ಹಡಪದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande