ಕೊಪ್ಪಳ : ಸೆ.22 ರಂದು ಗ್ರಾ.ಪಂ. ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧ ಜಾಥಾ
ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವಾಗಿಸುವ ಉದ್ದೇಶದಿಂದ ಸೆಪ್ಟೆಂಬರ್ 22 ರಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಾಥಾದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಕಾನೂನು ಸೇವೆಗಳ ಪ್ರಾಧಿಕ
ಕೊಪ್ಪಳ : ಸೆ.22 ರಂದು ಗ್ರಾ.ಪಂ. ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧ ಜಾಥಾ


ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವಾಗಿಸುವ ಉದ್ದೇಶದಿಂದ ಸೆಪ್ಟೆಂಬರ್ 22 ರಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಾಥಾದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಭಾಗೀದಾರರ ಇಲಾಖೆಗಳ ಅಧಿಕಾರಿ, ಮುಖ್ಯಸ್ಥರುಗಳು, ಮಹಿಳಾ ಸಂಘಗಳ ಪದಾಧಿಕಾರಿಗಳು, ಎನ್.ಆರ್.ಎಲ್.ಎಮ್, ಎನ್.ಯು.ಎಲ್.ಎಮ್ ಸಂಘಗಳ ಪದಾಧಿಕಾರಿಗಳು ಮತ್ತು ವಿವಿಧ ಸ್ವ-ಸಹಾಯ ಸಂಘಗಳ, ಯುವಕರ ಸಂಘ, ಯುವತಿಯರ ಸಂಘ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪೂಜಾರಿಗಳು, ಪುರೋಹಿತರು, ಅರ್ಚಕರು, ಮೌಲ್ವಿಗಳು, ಪಾದ್ರಿಗಳು, ಧಾರ್ಮಿಕ ಮುಖಂಡರು, ಧರ್ಮಗುರುಗಳು, ವಿವಾಹಗಳನ್ನು ಆಯೋಜಿಸುವ ಸಂಘಟಕರು, ಫಂಕ್ಷನ್ ಹಾಲ್ ಮತ್ತು ಶಾದಿ ಮಹಲ್‌ಗಳ ಮುಖ್ಯಸ್ಥರು, ಮುದ್ರಕರು, ಡೆಕೋರೇಷನ್‌ಗಳ ಮಾಲೀಕರು, ಮುಖ್ಯಸ್ಥರು, ವಿಡಿಯೋ, ಛಾಯಾಚಿತ್ರಗಾರರು, ಅಡುಗೆಯವರು, ವಾದ್ಯವೃಂದದವರನ್ನು ಒಳಗೊಂಡAತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವಾಗಿಸುವಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande