ಜಾತಿಗಣತಿ ಸಮೀಕ್ಷೆ ಮುಂದೂಡಿ : ವಚನಾನಂದ ಸ್ವಾಮೀಜಿ
ಹುಬ್ಬಳ್ಳಿ, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಸ್ತುತ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಸಾಕಷ್ಟು ದೋಷಗಳಿದ್ದು, ಇದನ್ನು ಮುಂದೂಡಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಮನೆಮನೆಗೆ ತೆರಳಿ ಕರಪತ್ರ ಅಂಟಿಸಿ ಜಾಗೃತಿ ಮೂಡಿಸಿದ ಸ್ವ
Vachanand swamiji


ಹುಬ್ಬಳ್ಳಿ, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸ್ತುತ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಸಾಕಷ್ಟು ದೋಷಗಳಿದ್ದು, ಇದನ್ನು ಮುಂದೂಡಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಮನೆಮನೆಗೆ ತೆರಳಿ ಕರಪತ್ರ ಅಂಟಿಸಿ ಜಾಗೃತಿ ಮೂಡಿಸಿದ ಸ್ವಾಮೀಜಿ, ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂತರಾಜ ಆಯೋಗದ ವರದಿ ವೈಜ್ಞಾನಿಕವಾಗಿರಲಿಲ್ಲ. ಈಗ ಮತ್ತೆ ಸಮೀಕ್ಷೆ ಮಾಡುತ್ತಿದ್ದಾರೆ, ಆದರೆ ಇದಲ್ಲಿಯೂ ಗೊಂದಲ ನಡೆಯುತ್ತಿದೆ. ಕರ್ನಾಟಕದ ಏಳು ಕೋಟಿ ಜನರ ಭವಿಷ್ಯ ಈ ಸಮೀಕ್ಷೆಯ ಮೇಲೆ ಅವಲಂಬಿತವಾಗಿರುವುದರಿಂದ ಸರಿಯಾಗಿ, ಸಮಾಧಾನದಿಂದ ನಡೆಸಬೇಕು ಎಂದು ಹೇಳಿದರು.

ಪಂಚಮಸಾಲಿ ಸಮುದಾಯದಲ್ಲಿ ಯಾವುದೇ ಗೊಂದಲವಿಲ್ಲ. ಧರ್ಮ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಲು ನಾವು ಹೇಳಿದ್ದೇವೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande